ಜನ ಮನದ ನಾಡಿ ಮಿಡಿತ

Advertisement

ಮಧ್ವ: ಮಧ್ವದಲ್ಲಿ ‘ಸುಪ್ರೇಮ ವಿದ್ಯಾ ಜ್ಯೋತಿ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಸುಪ್ರೇಮ ಚಾರಿಟೇಬಲ್ ಟ್ರಸ್ಟ್ (ರಿ.) ಮಧ್ವ ಇದರ ವತಿಯಿಂದ ‘ಸುಪ್ರೇಮ ವಿದ್ಯಾ ಜ್ಯೋತಿ’ ಕಾರ್ಯಕ್ರಮವು ಸೆಪ್ಟೆಂಬರ್ 20ರಂದು ಮಧ್ವದಲ್ಲಿ ನಡೆಯಿತು. ಶಿಕ್ಷಣವನ್ನು ಮುಂದುವರಿಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಮೇಘಶ್ರೀ ಯಾದೇಶ್ ರೈ ವಹಿಸಿದ್ದರು. ವಿದ್ಯಾರ್ಥಿಗಳ ಶೈಕ್ಷಣಿಕ ಮುಂದುವರಿಕೆಗೆ ನೆರವಾಗುವ ಉದ್ದೇಶದಿಂದ ವಿದ್ಯಾರ್ಥಿವೇತನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಮಧ್ವದ ಗೌರವ ಸಲಹೆಗಾರ ರಾಜ್ ಪ್ರಸಾದ್ ಆರಿಗಾ ಹಾಗೂ ಕಾವಳಪಡೂರು ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಭವಾನಿ ಶ್ರೀಧರ್ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಟ್ರಸ್ಟ್‌ನ ಹಿರಿಯರಾದ ಸುರೇಂದ್ರ ಪೂಜಾರಿ ಹಾಗೂ ಶ್ರೀಮತಿ ಪ್ರೇಮ, ಟ್ರಸ್ಟಿಗಳಾದ ರೇಣುಕಾ ರಮೇಶ್, ಶಿವರಾಜ್ ಗಟ್ಟಿ, ಗೀತಾ ಜಗದೀಶ್ ಕಂಜತ್ತೂರು ಹಾಗೂ ಯದುಶ್ ನೀತಾ ಮಧ್ವ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!