ಸುಪ್ರೇಮ ಚಾರಿಟೇಬಲ್ ಟ್ರಸ್ಟ್ (ರಿ.) ಮಧ್ವ ಇದರ ವತಿಯಿಂದ ‘ಸುಪ್ರೇಮ ವಿದ್ಯಾ ಜ್ಯೋತಿ’ ಕಾರ್ಯಕ್ರಮವು ಸೆಪ್ಟೆಂಬರ್ 20ರಂದು ಮಧ್ವದಲ್ಲಿ ನಡೆಯಿತು. ಶಿಕ್ಷಣವನ್ನು ಮುಂದುವರಿಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಮೇಘಶ್ರೀ ಯಾದೇಶ್ ರೈ ವಹಿಸಿದ್ದರು. ವಿದ್ಯಾರ್ಥಿಗಳ ಶೈಕ್ಷಣಿಕ ಮುಂದುವರಿಕೆಗೆ ನೆರವಾಗುವ ಉದ್ದೇಶದಿಂದ ವಿದ್ಯಾರ್ಥಿವೇತನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಮಧ್ವದ ಗೌರವ ಸಲಹೆಗಾರ ರಾಜ್ ಪ್ರಸಾದ್ ಆರಿಗಾ ಹಾಗೂ ಕಾವಳಪಡೂರು ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಭವಾನಿ ಶ್ರೀಧರ್ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಟ್ರಸ್ಟ್‌ನ ಹಿರಿಯರಾದ ಸುರೇಂದ್ರ ಪೂಜಾರಿ ಹಾಗೂ ಶ್ರೀಮತಿ ಪ್ರೇಮ, ಟ್ರಸ್ಟಿಗಳಾದ ರೇಣುಕಾ ರಮೇಶ್, ಶಿವರಾಜ್ ಗಟ್ಟಿ, ಗೀತಾ ಜಗದೀಶ್ ಕಂಜತ್ತೂರು ಹಾಗೂ ಯದುಶ್ ನೀತಾ ಮಧ್ವ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…