ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನೀರು ಸರಬರಾಜು ಕಡಿತ ವಿಚಾರಕ್ಕೆ ದ್ವೇಷ; ತಲವಾರು, ರಾಡ್‌ನಿಂದ ದಾಳಿ ಆರೋಪ…!

ನೀರು ಸರಬರಾಜು ಕಡಿತಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ದ್ವೇಷ ಹೊಂದಿದ್ದವರು ಎನ್ನಲಾದ ಮೂವರು ವ್ಯಕ್ತಿಗಳು ತಲವಾರು ಹಾಗೂ ಕಬ್ಬಿಣದ ರಾಡ್‌ಗಳಿಂದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಕಬೆಳ್ಳೂರು ಗ್ರಾಮದ ಧನುಪೂಜೆ ನಿವಾಸಿ ಪ್ರಶಾಂತ್ ಬೆಳ್ಚಾಡ್ ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಶಾಂತ್, ರಾಮದಾಸ ಹಾಗೂ ಶಂಕರ ಎಂಬವರ ವಿರುದ್ಧ ಆರೋಪ ಮಾಡಲಾಗಿದೆ. ದೂರುದಾರರು ಬಡಗಬೆಳ್ಳೂರು ಗ್ರಾಮ ಪಂಚಾಯಿತಿಯ ತೆಂಕಬೆಳ್ಳೂರು ವಾರ್ಡ್‌ನಲ್ಲಿ ಪಂಚಾಯಿತಿ ನೀರು ಸರಬರಾಜು ಮಾಡುವ ಕೆಲಸ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

ಕಮ್ಮಾಜೆ-ಧನುಪೂಜೆ ನಾಗಶ್ರೀ ಮಿತ್ರ ಮಂಡಳಿಯವರು ಪಂಚಾಯಿತಿಯ ಅನುಮತಿ ಪಡೆಯದೆ ಒಂದು ಇಂಚಿನ ಪೈಪ್ ಅಳವಡಿಸಿ ನೀರು ಸರಬರಾಜು ಮಾಡುತ್ತಿರುವುದನ್ನು ಪಂಚಾಯಿತಿ ಗಮನಕ್ಕೆ ತಂದ ಹಿನ್ನೆಲೆಯಲ್ಲಿ, ಪಿಡಿಒ ಅವರ ಆದೇಶದಂತೆ ನೀರು ಸರಬರಾಜು ಕಡಿತಗೊಳಿಸಲಾಗಿತ್ತು. ಈ ವಿಚಾರವಾಗಿ ಮಿತ್ರ ಮಂಡಳಿಯ ಅಧ್ಯಕ್ಷ ರಾಮದಾಸ ಅವರು ದೂರುದಾರರ ಮೇಲೆ ದ್ವೇಷ ಹೊಂದಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದೇ ವೇಳೆ ದೂರುದಾರರ ಪರಿಚಯದ ಮೂಡಾಯಿಕೊಡಿ ನಿವಾಸಿ ಪ್ರಶಾಂತ್ ಅವರು ₹5 ಸಾವಿರ ಸಾಲ ಪಡೆದಿದ್ದು, ಹಣವನ್ನು ವಾಪಸ್ ನೀಡದೆ ಸೆಪ್ಟೆಂಬರ್ 7ರಂದು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!