ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹70 ಕೋಟಿಗೂ ಅಧಿಕ ಅನುದಾನ ಮಂಜೂರು ಮಾಡಿದ್ದು, ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಅಧ್ಯಕ್ಷ ಚೇತನ್ ಬೆಂಗ್ರೆ ತಿಳಿಸಿದ್ದಾರೆ.
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟೆಪುರದಲ್ಲಿ ನಾಡದೋಣಿಗಳಿಗಾಗಿ ₹8 ಕೋಟಿ, ಕಸಬಾ ಬೆಂಗ್ರೆಯಲ್ಲಿ ದೋಣಿ ತಂಗುದಾಣ ನಿರ್ಮಾಣಕ್ಕೆ ₹6 ಕೋಟಿ ಹಾಗೂ ಅಳಿವೆಬಾಗಿಲಿನಲ್ಲಿ ಬಾಯ್‌ಗಳ ಅಳವಡಿಕೆಗೆ ₹1 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದರು.
ಎಕ್ಕೂರಿನಲ್ಲಿ ಸಗಟು ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಮೀನುಗಾರಿಕಾ ಸಂಪರ್ಕ ರಸ್ತೆಗಳ ಅಭಿವೃದ್ಧಿಗೂ ₹20 ಕೋಟಿ ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಅಧ್ಯಕ್ಷ ರವಿ ಶ್ರೀಯಾನ್, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಸರಳ ಕರ್ಕೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…