₹5 ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ವಂಚನೆ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಒಟ್ಟು ₹25 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ.
ಇದರ ಭಾಗವಾಗಿ ₹5 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.



