ಜನ ಮನದ ನಾಡಿ ಮಿಡಿತ

Advertisement

ಪಣಂಬೂರು: ಹೆದ್ದಾರಿಗೆ ಅಡ್ಡವಾಗಿ ನಿಂತ ಟ್ರೇಲರ್ ಲಾರಿ; ಕಿಲೋಮೀಟರ್‌ಗಟ್ಟಲೆ ವಾಹನಗಳ ಸಾಲು

ಪಣಂಬೂರು ಬೀಚ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರೇಲರ್ ಲಾರಿಯೊಂದು ರಸ್ತೆಗೆ ಅಡ್ಡವಾಗಿ ನಿಂತ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.

ಬೈಕಂಪಾಡಿ ಕಡೆಯಿಂದ ಕೂಳೂರು ಕಡೆಗೆ ಸಾಗುವ ಮಾರ್ಗದಲ್ಲಿ ಲಾರಿ ಅಡ್ಡವಾಗಿ ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅತ್ಯಂತ ವಾಹನ ದಟ್ಟಣೆಯ ಈ ಮಾರ್ಗದಲ್ಲಿ ಸಂಚಾರ ನಿಧಾನಗತಿಗೆ ತಿರುಗಿ, ಸಾರ್ವಜನಿಕರು ರಸ್ತೆಯಲ್ಲೇ ಕಾಯುವಂತಾಯಿತು.

ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ರಸ್ತೆ ಮಧ್ಯೆ ಬಾಕಿಯಾಗಿದ್ದ ವಾಹನವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡರು. ಆದರೆ, ಅಷ್ಟರಲ್ಲಾಗಲೇ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಹಾಗೂ ರಸ್ತೆ ಬಳಕೆದಾರರು ಪರದಾಡುವಂತಾಯಿತು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!