ಪಣಂಬೂರು ಬೀಚ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರೇಲರ್ ಲಾರಿಯೊಂದು ರಸ್ತೆಗೆ ಅಡ್ಡವಾಗಿ ನಿಂತ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ಬೈಕಂಪಾಡಿ ಕಡೆಯಿಂದ ಕೂಳೂರು ಕಡೆಗೆ ಸಾಗುವ ಮಾರ್ಗದಲ್ಲಿ ಲಾರಿ ಅಡ್ಡವಾಗಿ ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅತ್ಯಂತ ವಾಹನ ದಟ್ಟಣೆಯ ಈ ಮಾರ್ಗದಲ್ಲಿ ಸಂಚಾರ ನಿಧಾನಗತಿಗೆ ತಿರುಗಿ, ಸಾರ್ವಜನಿಕರು ರಸ್ತೆಯಲ್ಲೇ ಕಾಯುವಂತಾಯಿತು.
ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ರಸ್ತೆ ಮಧ್ಯೆ ಬಾಕಿಯಾಗಿದ್ದ ವಾಹನವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡರು. ಆದರೆ, ಅಷ್ಟರಲ್ಲಾಗಲೇ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಹಾಗೂ ರಸ್ತೆ ಬಳಕೆದಾರರು ಪರದಾಡುವಂತಾಯಿತು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…