ಅಮೆರಿಕದ ಟೆಕ್ಸಾಸ್‌ನಲ್ಲಿ 90 ಅಡಿ ಎತ್ತರದ ಭಗವಾನ್ ಹನುಮಂತನ ವಿಗ್ರಹವನ್ನು ತೆರವುಗೊಳಿಸುವುದಾಗಿ ಯೂಟ್ಯೂಬರ್ ಜೆಸ್ಸಿ ಹ್ಯೂಸ್ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ.
ಮುಂಬರುವ ಅಮೆರಿಕದ ಮಧ್ಯಂತರ ಚುನಾವಣೆಯ ಹಿನ್ನೆಲೆಯಲ್ಲಿ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದ್ದು, ಹಿಂದೂ-ಅಮೆರಿಕನ್ ಸಮುದಾಯ ಸೇರಿದಂತೆ ವಿವಿಧ ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದೆ.
ಹೂಸ್ಟನ್ ಸಮೀಪದ ಶುಗರ್‌ಲ್ಯಾಂಡ್‌ನಲ್ಲಿರುವ ಶ್ರೀ ಅಷ್ಟಲಕ್ಷ್ಮಿ ದೇವಾಲಯದ ಆವರಣದಲ್ಲಿ ‘ಸ್ಟ್ಯಾಚು ಆಫ್ ಯೂನಿಯನ್’ ಎಂದು ಕರೆಯಲಾಗುವ 90 ಅಡಿ ಎತ್ತರದ ಪಂಚಲೋಹದ ಹನುಮಂತನ ವಿಗ್ರಹವನ್ನು 2024ರ ಆಗಸ್ಟ್‌ನಲ್ಲಿ ಪ್ರತಿಷ್ಠಾಪಿಸಲಾಗಿತ್ತು. ದೇವಾಲಯದ ಅಧಿಕೃತ ಮಾಹಿತಿಯ ಪ್ರಕಾರ, ಈ ವಿಗ್ರಹವನ್ನು ಭಕ್ತಿ, ಶಕ್ತಿ ಮತ್ತು ನಿಸ್ವಾರ್ಥ ಸೇವೆಯ ಪ್ರತೀಕವಾಗಿ ಸ್ಥಾಪಿಸಲಾಗಿದ್ದು, 2024ರ ಆಗಸ್ಟ್ 18ರಂದು ಉದ್ಘಾಟನಾ ಕಾರ್ಯಕ್ರಮ ನಡೆದಿತ್ತು.
ಇತ್ತೀಚೆಗೆ ಸಂಪ್ರದಾಯವಾದಿ ಯೂಟ್ಯೂಬರ್ ಹಾಗೂ ‘ಮೇಕ್ ಅಮೆರಿಕ ಗ್ರೇಟ್ ಅಗೇನ್’ ಚಳವಳಿಯೊಂದಿಗೆ ಗುರುತಿಸಿಕೊಂಡಿರುವ ಜೆಸ್ಸಿ ಹ್ಯೂಸ್, ಹನುಮಂತನ ವಿಗ್ರಹದ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡು, “Btw, when we win, we are tearing this down” ಎಂದು ಬರೆದುಕೊಂಡಿದ್ದಾರೆ. ಆದರೆ ಅವರು ‘ನಾವು ಗೆದ್ದಾಗ’ ಎಂಬ ಹೇಳಿಕೆಯಲ್ಲಿ ಯಾವ ಚುನಾವಣಾ ಅಥವಾ ರಾಜಕೀಯ ಗೆಲುವನ್ನು ಉಲ್ಲೇಖಿಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ.
ಹ್ಯೂಸ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅಮೆರಿಕ ಸೇನೆಯ ಮಾಜಿ ಯೋಧ ಹಾಗೂ ಹಿಂದೂ-ಅಮೆರಿಕನ್ ರುಚಿರ್ ಬಕ್ಷಿ “ನನ್ನ ಧರ್ಮವನ್ನು ಗುರಿಯಾಗಿಸುವ ದೇಶಕ್ಕಾಗಿ ನಾನು ಯುದ್ಧಕ್ಕೆ ಹೋಗಿರಲಿಲ್ಲ” ಎಂದಿದ್ದಾರೆ.
ಅಫ್ಘಾನಿಸ್ತಾನ ಮತ್ತು ಇರಾಕ್‌ನಲ್ಲಿ ಸೇನಾ ಸೇವೆ ಸಲ್ಲಿಸಿರುವ ಬಕ್ಷಿ, ದೇವಾಲಯವನ್ನು ಧ್ವಂಸಗೊಳಿಸುವ ಕರೆ ದೇಶಭಕ್ತಿಯಲ್ಲ ಎಂದು ಹೇಳಿದ್ದಾರೆ.
ಈ ಹೇಳಿಕೆಗೆ ಉತ್ತರ ಅಮೆರಿಕದ ಹಿಂದೂಗಳ ಒಕ್ಕೂಟ (CoHNA) ಸೇರಿದಂತೆ ಕೆಲ ಹಿಂದೂ ಸಂಘಟನೆಗಳೂ ಪ್ರತಿಕ್ರಿಯಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ದ್ವೇಷದ ಹೇಳಿಕೆಗಳು ಹರಡುವ ಕುರಿತು ಆಕ್ಷೇಪ ವ್ಯಕ್ತಪಡಿಸಿವೆ. ಇದೇ ವೇಳೆ, 2024ರಲ್ಲಿ ಹನುಮಂತನ ವಿಗ್ರಹ ಪ್ರತಿಷ್ಠಾಪನೆಯ ಸಂದರ್ಭದಲ್ಲೂ ಕೆಲವು ಸ್ಥಳೀಯ ಧಾರ್ಮಿಕ ಗುಂಪುಗಳು ವಿರೋಧ ವ್ಯಕ್ತಪಡಿಸಿದ್ದವು ಎಂದು ಹೂಸ್ಟನ್ ಕ್ರಾನಿಕಲ್ ವರದಿ ಮಾಡಿತ್ತು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…