ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆಯ ಲಾಂಛನವನ್ನು ಅನಾವರಣಗೊಳಿಸಿದರು.
ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವವು 2031ರಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಪಂಚವಾರ್ಷಿಕ ಯೋಜನೆ ರೂಪಿಸಲಾಗಿದೆ. ಈ ಯೋಜನೆಯ ಲಾಂಛನವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಭಕ್ತಿ, ಜ್ಞಾನ ಹಾಗೂ ಸೇವೆಯ ಜೀವನವು ಅನೇಕರಿಗೆ ಪ್ರೇರಣೆಯಾಗಿದ್ದು, ಶತಮಾನೋತ್ಸವದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳು ಅವರ ಆದರ್ಶಗಳನ್ನು ಮುಂದುವರಿಸಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಕ್ಷಗಾನದ ಸಾಂಪ್ರದಾಯಿಕ ರಾಜಕಿರೀಟ ತೊಡಿಸಿ, ಶಾಲು ಹೊದಿಸಿ ಗೌರವಿಸಿದರು. ಸ್ವರ್ಣ ಲೇಪಿತ ಕಾಲೀಯ ಕೃಷ್ಣನ ಪ್ರತಿಮೆ, ಫಲ ಹಾಗೂ ಮಂತ್ರಾಕ್ಷತೆಯನ್ನು ನೀಡಿ ಸನ್ಮಾನಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಜನ್ಮದಿನದ ಅಂಗವಾಗಿ ಅವರ ಶ್ರೇಯಸ್ಸಿಗಾಗಿ ನೆರವೇರಿಸಲಾಗಿದ್ದ ಪೂರ್ಣ ನವಗ್ರಹ ಹೋಮ ಹಾಗೂ ರಾಷ್ಟ್ರಸೂಕ್ತ ಹೋಮದ ಪ್ರಸಾದವನ್ನು ಶ್ರೀಗಳು ಪ್ರಧಾನಿಗೆ ನೀಡಿದರು. ಪ್ರಧಾನಿಯವರ ಆಯುರಾರೋಗ್ಯ ಹಾಗೂ ಶ್ರೇಯಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.
ಪೇಜಾವರ ಶ್ರೀಗಳೊಂದಿಗಿನ ಭೇಟಿಯ ಕುರಿತು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲೂ ಮಾಹಿತಿ ಹಂಚಿಕೊಂಡಿದ್ದು, ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜೀವನ ಹಾಗೂ ಸೇವಾ ಕಾರ್ಯಗಳು ಅನೇಕರಿಗೆ ನಿರಂತರ ಪ್ರೇರಣೆ ನೀಡುತ್ತಿವೆ ಎಂದು ಹೇಳಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…