ಜನ ಮನದ ನಾಡಿ ಮಿಡಿತ

Advertisement

ಶಾರ್ಜಾ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಬರ್ಬರ ಹತ್ಯೆ; ಪತ್ನಿ, ಅಪ್ರಾಪ್ತ ಪುತ್ರ ನಾಪತ್ತೆ…!

ದುಬೈನಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ಪ್ರಕಾಶ್ ಕುಂದರ್ ಅವರು ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 20ರ ಬಳಿಕ ಪ್ರಕಾಶ್ ಅವರು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ.

ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಶಾರ್ಜಾ ಪೊಲೀಸರು ಪ್ರಕಾಶ್ ಅವರ ಸ್ವಂತ ಕಾರಿನಲ್ಲಿ ಮೃತದೇಹ ಪತ್ತೆಹಚ್ಚಿದ್ದಾರೆ. ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಮೃತದೇಹವನ್ನು ಛಿದ್ರಗೊಳಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಇನ್ನು ಘಟನೆ ಬಳಿಕ ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಪುತ್ರ ನಾಪತ್ತೆಯಾಗಿದ್ದಾರೆ. ಹೀಗಾಗಿ ಪೊಲೀಸರು ತಾಯಿ-ಮಗನ ಕುರಿತು ಮಾಹಿತಿ ಕಲೆಹಾಕುತ್ತಿದ್ದು, ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

ಟೀನಾ ಹಾಗೂ ಪುತ್ರ ಭಾರತಕ್ಕೆ ತೆರಳಿರುವ ಸಾಧ್ಯತೆಯ ಬಗ್ಗೆಯೂ ವರದಿಗಳಿದ್ದು, ಅವರ ನಿಖರ ಸ್ಥಳ ಇನ್ನೂ ಸ್ಪಷ್ಟವಾಗಿಲ್ಲ. ಸುಮಾರು 20 ವರ್ಷಗಳ ಹಿಂದೆ ಪ್ರಕಾಶ್ ಹಾಗೂ ಟೀನಾ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.

ಶಾರ್ಜಾದಲ್ಲಿ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ತವರಿಗೆ ತರಲು ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದಾರೆ. ಪ್ರಕರಣದ ನಿಖರ ಕಾರಣ ಹಾಗೂ ಹತ್ಯೆಯ ಹಿಂದಿರುವ ಅಂಶಗಳ ಕುರಿತು ಶಾರ್ಜಾ ಪೊಲೀಸರ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!