ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಗ್ಗೆ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.
ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (ವಯಸ್ಸು ತಿಳಿದುಬಂದಿಲ್ಲ) ಮೃತ ಯುವಕ. ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪದ್ಮನಾಭ ಅವರು ಕಳೆದ ನಾಲ್ಕು ತಿಂಗಳಿನಿಂದ ಕೆಲಸಕ್ಕೆ ತೆರಳುತ್ತಿರಲಿಲ್ಲ ಎನ್ನಲಾಗಿದೆ.
ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ ಅವರು ರಾತ್ರಿ ಕಳೆದರೂ ಮನೆಗೆ ವಾಪಸ್ ಬಂದಿರಲಿಲ್ಲ. ಈ ನಡುವೆ ದೇವಸ್ಥಾನದ ಸಮೀಪ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಕುಟುಂಬಸ್ಥರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಕೋಟಿತೀರ್ಥ ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲುಗಳ ಮೇಲೆ ಚಪ್ಪಲಿ ಹಾಗೂ ಟೋಪಿ ಪತ್ತೆಯಾದ ಹಿನ್ನೆಲೆಯಲ್ಲಿ ಅವರು ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಬುಧವಾರ ಬೆಳಗ್ಗೆ ಶೋಧ ಕಾರ್ಯ ಆರಂಭಿಸಲಾಯಿತು.
ನಿತ್ಯ ಕೆರೆಯಲ್ಲಿ ಈಜಲು ಬರುವ ಮಾರ್ಕೋಡು ಸುಧೀರ್ ಕುಮಾರ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಸತ್ಯನಾರಾಯಣ ಮಂಜ ಸೇರಿದಂತೆ ಸ್ಥಳೀಯ ಈಜುಗಾರರು ಬೋಟ್ ಸಹಾಯದಿಂದ ಶೋಧ ನಡೆಸಿದರು. ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ನೀರಿನಲ್ಲಿ ಮೃತದೇಹ ಪತ್ತೆಯಾಯಿತು.
ಬಳಿಕ ಸ್ಥಳಕ್ಕೆ ಆಗಮಿಸಿದ ಮುಳುಗುತಜ್ಞ ಈಶ್ವರ ಮಲ್ಪೆ ಹಾಗೂ ತಂಡ ಸ್ಥಳೀಯ ಈಜುಗಾರರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರ
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…