ಮಂಗಳೂರು: ಏಳು ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಬ್ದುಲ್ ಅಝೀಜ್ (34) ಬಂಧಿತ ಆರೋಪಿಯಾಗಿದ್ದು, ಅತನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಚರಸ್ ಮತ್ತು ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿ ಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಫ್ಲೆಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ತಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಸೂರಿಂಜೆ ಕಿನ್ನಿಗುಡ್ಡೆ ಹೌಸ್ ನಿವಾಸಿ ಅಬ್ದುಲ್ ಅಝೀಜ್‌ನನ್ನು ವಶಕ್ಕೆ ಪಡೆದು ಕಾರು ಪರಿಶೀಲನೆ ಮಾಡಿದಾಗ 250 ಗ್ರಾಂ ತೂಕದ ಮಾದಕ ವಸ್ತು ಚರಸ್ ಪತ್ತೆಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಇನ್ನು ಪರಾರಿಯಾದ ಆರೊಪಿಯ ಪತ್ತೆಗಾಗಿ ಪೊಲೀಸರು ತೀವ್ರ ಕಾರ್ಯಚರಣೆ ನಡೆಸುತ್ತಿದ್ದಾರೆ. ಬಜಪೆ ಠಾಣಾ ಪಿ.ಐ. ಪ್ರಕಾಶ್ ನೇತೃತ್ವದ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿತ್ತು.
ಜ್ಯೋತಿಷ್ಯ ಹೇಳುವ ನೆಪದಲ್ಲಿ 62 ವರ್ಷದ ಶಾಂತಮ್ಮ ಅವರನ್ನು ನಂಬಿಸಿ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ…
ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ…
ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ…
ಭಾರತದ ವಿರುದ್ಧ ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ವೆಸ್ಟ್ ಇಂಡೀಸ್ ತಂಡದ ಆಟಗಾರರಾದ…
ಭಾರತ ತಂಡದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ದೇಶಿ ಕ್ರಿಕೆಟ್ನಲ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್ಕೋಟ್ನ ನಿರಂಜನ್…
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರ…