ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸತೀಶ್ ಚಿಕಿತ್ಸೆ ಫಲಿಸದೆ ಸಾವು…!

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೋಳಿಯಾರು ಗ್ರಾಮದ ಚೇಳೂರು ನಿವಾಸಿ ಸತೀಶ್ ಯಾನೆ ಕುಟ್ಟ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೆಪ್ಟೆಂಬರ್ 19ರಂದು ಸತೀಶ್ ಹಾಗೂ ಮೊಹಮ್ಮದ್ ಇಸಾಕ್ ಇಬ್ಬರು ಬೈಕ್‌ನಲ್ಲಿ ಮುಡಿಪು–ಪಜೀರು ಮಾರ್ಗವಾಗಿ ಕೊಣಾಜೆ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಹಿಮಾಲಯನ್ ಬೈಕ್‌ಗೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಅಪಘಾತದಲ್ಲಿ ಸತೀಶ್ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಸತೀಶ್ ಅವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದವರು ಎಂದು ತಿಳಿದುಬಂದಿದೆ. ಕಳೆದ 28 ವರ್ಷಗಳಿಂದ ಬಿಜೆಪಿ ಮಂಗಳೂರು ಮಂಡಲದ ಮುಖಂಡ ಹೇಮಂತ್ ಶೆಟ್ಟಿ ದೇರಳಕಟ್ಟೆ ಅವರ ಕಟ್ಟಡ ಗುತ್ತಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.

ಅವಿವಾಹಿತರಾಗಿದ್ದ ಸತೀಶ್ ಅವರು ತಾಯಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!