ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೋಳಿಯಾರು ಗ್ರಾಮದ ಚೇಳೂರು ನಿವಾಸಿ ಸತೀಶ್ ಯಾನೆ ಕುಟ್ಟ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸೆಪ್ಟೆಂಬರ್ 19ರಂದು ಸತೀಶ್ ಹಾಗೂ ಮೊಹಮ್ಮದ್ ಇಸಾಕ್ ಇಬ್ಬರು ಬೈಕ್‌ನಲ್ಲಿ ಮುಡಿಪು–ಪಜೀರು ಮಾರ್ಗವಾಗಿ ಕೊಣಾಜೆ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಹಿಮಾಲಯನ್ ಬೈಕ್‌ಗೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಅಪಘಾತದಲ್ಲಿ ಸತೀಶ್ ಅವರ ತಲೆಗೆ ಗಂಭೀರ ಗಾಯವಾಗಿತ್ತು.
ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಸತೀಶ್ ಅವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದವರು ಎಂದು ತಿಳಿದುಬಂದಿದೆ. ಕಳೆದ 28 ವರ್ಷಗಳಿಂದ ಬಿಜೆಪಿ ಮಂಗಳೂರು ಮಂಡಲದ ಮುಖಂಡ ಹೇಮಂತ್ ಶೆಟ್ಟಿ ದೇರಳಕಟ್ಟೆ ಅವರ ಕಟ್ಟಡ ಗುತ್ತಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.
ಅವಿವಾಹಿತರಾಗಿದ್ದ ಸತೀಶ್ ಅವರು ತಾಯಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…