ಬಂಟ್ವಾಳ ಪೇಟೆ ಹಾಗೂ ಮೂಡುಬಿದಿರೆ ಕಡೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮಳೆ ನಿಂತಿದ್ದರೂ ರಸ್ತೆಯ ಗುಂಡಿಗಳಿಗೆ ಮಾತ್ರ ಮುಕ್ತಿ ಸಿಕ್ಕಿಲ್ಲ ಎಂಬುದು ಸ್ಥಳೀಯರ ದೂರು.
ಲೊರೆಟ್ಟೊದಿಂದ ಬಂಟ್ವಾಳ ಪೇಟೆ ಕಡೆಗೆ ಸಾಗುವ ರಸ್ತೆಯಲ್ಲೂ ಪರಿಸ್ಥಿತಿ ಗಂಭೀರವಾಗಿದೆ. ಈ ಮಾರ್ಗದಲ್ಲಿ ಶಾಲೆ-ಕಾಲೇಜುಗಳಿದ್ದು, ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಪ್ರಮುಖ ತಿರುವು ಹಾಗೂ ಸಂಚಾರ ದಟ್ಟಣೆಯ ಪ್ರದೇಶಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿರುವುದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.
ಗುಂಡಿಗಳನ್ನು ತಪ್ಪಿಸಲು ವಾಹನ ಸವಾರರು ಅನಿವಾರ್ಯವಾಗಿ ರಸ್ತೆಯ ಮತ್ತೊಂದು ಬದಿಗೆ, ಅಂದರೆ ರಾಂಗ್ ಸೈಡ್‌ಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಎದುರಿನಿಂದ ಬರುವ ವಾಹನಗಳಿಗೆ ಡಿಕ್ಕಿಯಾಗುವ ಅಪಾಯವೂ ಎದುರಾಗಿದೆ. ಅಪಾಯಕಾರಿ ಹಂಪ್‌ಗಳ ಜೊತೆಗೆ ಗುಂಡಿಗಳು ಮತ್ತಷ್ಟು ಆತಂಕ ಸೃಷ್ಟಿಸಿವೆ.
ಇನ್ನು ಬಂಟ್ವಾಳ ಪೇಟೆಯ ಕೊಟ್ಯಮನಗಂಡಿ ಬಸ್ ನಿಲ್ದಾಣದ ಬಳಿ ಪರಿಸ್ಥಿತಿ ಇನ್ನಷ್ಟು ಅಪಾಯಕಾರಿಯಾಗಿದೆ. ಕಾಂಕ್ರೀಟ್ ಹಾಗೂ ಡಾಂಬರು ರಸ್ತೆಯ ಮಧ್ಯಭಾಗದಲ್ಲಿ ಬಾವಿಯಂತೆಯೇ ತೆರೆದ ಬೃಹತ್ ಗುಂಡಿ ನಿರ್ಮಾಣವಾಗಿದೆ. ಈಗಾಗಲೇ ಹತ್ತಾರು ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಪ್ರಮುಖ ರಸ್ತೆಯಲ್ಲೇ ಇಂತಹ ಅಪಾಯಕಾರಿ ಗುಂಡಿಗಳು ನಿರ್ಮಾಣವಾಗಿದ್ದರೂ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಗುಂಡಿಗಳನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…