ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿಯ ಮೂವರು ಪ್ರತಿಭೆಗಳು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತುಳುರಂಗಭೂಮಿಯ ಖ್ಯಾತ ನಟಿ ರೂಪಶ್ರೀ ವರ್ಕಾಡಿ, ಬಾಲ ನಟ ಅತೀಶ್ ಶೆಟ್ಟಿ ಹಾಗೂ ನಟ, ನಿರ್ದೇಶಕ ಶಿವ ಧ್ವಜ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದು, ಒಟ್ಟು 92 ಮಂದಿಗೆ ಪ್ರಶಸ್ತಿಗಳನ್ನು ವಿತರಿಸಿದರು. ಈ ಸಮಾರಂಭದಲ್ಲಿ ಕನ್ನಡದ ‘ಮಿಥ್ಯ’ ಚಿತ್ರವೂ ಮೂರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
‘ಮಿಥ್ಯ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅತೀಶ್ ಶೆಟ್ಟಿ ಅವರಿಗೆ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿ ಹಾಗೂ ರೂಪಶ್ರೀ ವರ್ಕಾಡಿ ಅವರಿಗೆ ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.
ಇದೇ ವೇಳೆ ಶಿವ ಧ್ವಜ್ ಶೆಟ್ಟಿ ನಿರ್ದೇಶನದ ತುಳು ಸಿನಿಮಾ ‘ಇಂಬು’ ಕೂಡ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಕರಾವಳಿಯ ಪ್ರತಿಭೆಗಳು ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವುದು ತುಳು ಹಾಗೂ ಕರಾವಳಿ ಚಿತ್ರರಂಗಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…