ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಜ್ಪೆ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಸಂತ್ರಸ್ತರಿಗೆ ವಾಪಸ್ ನೀಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಸಂತ್ರಸ್ತರಿಂದ ಈಗಾಗಲೇ ₹15 ಸಾವಿರ ಮುಂಗಡವಾಗಿ ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಉಳಿದ ₹5 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಾಲಕೃಷ್ಣ ಅವರನ್ನು ಲಂಚದ ಹಣದ ಸಮೇತ ಬಂಧಿಸಿದ್ದರು. ಬಳಿಕ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನ್ಯಾಯಾಲಯದಲ್ಲಿ ಅನಾರೋಗ್ಯದ ಕಾರಣ ನೀಡಿ ಆಸ್ಪತ್ರೆಗೆ ದಾಖಲಿಸುವಂತೆ ಬಾಲಕೃಷ್ಣ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈ ನಡುವೆ ಬಂಧಿತ ಇನ್ಸ್‌ಪೆಕ್ಟರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

ಬೆಳ್ತಂಗಡಿ: ಕೆರೆಯಲ್ಲಿ ಪತ್ನಿಯ ಮೃತದೇಹ ಪತ್ತೆ; ಬೆನ್ನಲ್ಲೇ ಪತಿಯೂ ಆತ್ಮಹತ್ಯೆ..!

error: Content is protected !!