ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಮಠಕ್ಕೆ ಆಗಮಿಸಿದ ರವಿಶಾಸ್ತ್ರಿ ಅವರನ್ನು ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಫಲ ಹಾಗೂ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ರವಿಶಾಸ್ತ್ರಿ ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು, ಮಠದ ಧಾರ್ಮಿಕ ಪರಂಪರೆ ಹಾಗೂ ಅಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದರು. ರವಿಶಾಸ್ತ್ರಿ ಅವರ ಮಠ ಭೇಟಿಯ ವೇಳೆ ಮಠದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

ಬೆಳ್ತಂಗಡಿ: ಕೆರೆಯಲ್ಲಿ ಪತ್ನಿಯ ಮೃತದೇಹ ಪತ್ತೆ; ಬೆನ್ನಲ್ಲೇ ಪತಿಯೂ ಆತ್ಮಹತ್ಯೆ..!

error: Content is protected !!