ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ದಾಳಿ ನಡೆಸಿ, ಸುಮಾರು ₹16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಲ್ತೋಡು ಬೀಟ್ ಅಧಿಕಾರಿಯಿಂದ ಲಭಿಸಿದ ಮಾಹಿತಿಯ ಮೇರೆಗೆ ಬೈಂದೂರು ಠಾಣೆಯ ಪಿಎಸ್‌ಐ ಸುನಿಲ್ ಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿಕೊಂಡು ಸೆ.23ರಂದು ಮಧ್ಯಾಹ್ನ 1.15ರ ಸುಮಾರಿಗೆ ದಾಳಿ ನಡೆಸಿದರು.

ದಾಳಿ ವೇಳೆ ಕೆಂಪುಕಲ್ಲು ತುಂಬಿದ್ದ ಎರಡು ಟಿಪ್ಪರ್‌ಗಳು, ಬ್ಲೇಡ್ ಅಳವಡಿಸಿದ ಎರಡು ಪವರ್ ಟಿಲ್ಲರ್ ಯಂತ್ರಗಳು ಹಾಗೂ ಎರಡು ಕಲ್ಲು ಎತ್ತುವ ಟ್ರಾಲಿ ಯಂತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹16 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ರವೀಂದ್ರ ಪೂಜಾರಿ ಹಾಗೂ ಸತೀಶ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಗಣಿಗಾರಿಕೆ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

ಬೆಳ್ತಂಗಡಿ: ಕೆರೆಯಲ್ಲಿ ಪತ್ನಿಯ ಮೃತದೇಹ ಪತ್ತೆ; ಬೆನ್ನಲ್ಲೇ ಪತಿಯೂ ಆತ್ಮಹತ್ಯೆ..!

error: Content is protected !!