ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹಸಂಚಾಲಕರಾಗಿ ನೇಮಕ ಮಾಡಲಾಗಿದೆ.

ಪ್ರದೀಪ್ ಅಜ್ಜಿಬೆಟ್ಟು ಅವರು ಈ ಹಿಂದೆ ಹಿಂದೂ ಜಾಗರಣಾ ವೇದಿಕೆಯ ತಾಲೂಕು ಹೋರಾಟ ಪ್ರಮುಖ್, ಭಜರಂಗದಳದ ತಾಲೂಕು ಸಂಚಾಲಕ ಹಾಗೂ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಸಂಘಟನೆಯ ವಿವಿಧ ಹಂತಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿರುವ ಅವರು, ಇದೀಗ ಜಿಲ್ಲಾ ಮಟ್ಟದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಮಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ನಡೆದ ಬೈಠಕ್‌ನಲ್ಲಿ ನೂತನ ಜವಾಬ್ದಾರಿಯನ್ನು ಘೋಷಿಸಲಾಯಿತು. ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಹಸಂಚಾಲಕ ಸತೀಶ್ ಅವರು ಪ್ರದೀಪ್ ಅಜ್ಜಿಬೆಟ್ಟು ಅವರ ಹೆಸರನ್ನು ಘೋಷಿಸಿದರು.

ಜಿಲ್ಲಾ ಮಟ್ಟದಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಬಲಪಡಿಸುವುದು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ವಿಚಾರಗಳಲ್ಲಿ ಸಂಘಟನೆಯನ್ನು ಮುನ್ನಡೆಸುವ ಜವಾಬ್ದಾರಿ ನೂತನ ಜಿಲ್ಲಾ ಸಹಸಂಚಾಲಕರ ಮೇಲಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

ಬೆಳ್ತಂಗಡಿ: ಕೆರೆಯಲ್ಲಿ ಪತ್ನಿಯ ಮೃತದೇಹ ಪತ್ತೆ; ಬೆನ್ನಲ್ಲೇ ಪತಿಯೂ ಆತ್ಮಹತ್ಯೆ..!

error: Content is protected !!