ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಅವರ ಪತ್ನಿ ಚಂದ್ರಿಕಾ ಐಕಳ ಹರೀಶ್ ಶೆಟ್ಟಿ ದಂಪತಿ ಭಾಗವಹಿಸಿ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪವೀಣ್ ಭೋಜ ಶೆಟ್ಟಿ ವಹಿಸಿದ್ದರು. ಶಶಿಧರ್ ಶೆಟ್ಟಿ ಬರೋಡ ಹಾಗೂ ಡಾ. ಎಂ.ಎಸ್. ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಶಿಬರೂರು ಸುರೇಶ್ ಎಲ್. ಶೆಟ್ಟಿ ಹಾಗೂ ಅವರ ಪತ್ನಿಯನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಗಿರೀಶ್ ಶೆಟ್ಟಿ ತೆಳ್ಳಾರ್, ಡಾ. ಆರ್.ಕೆ. ಶೆಟ್ಟಿ, ಬೆಳ್ಳಾಡಿ ಅಶೋಕ್ ಎಸ್. ಶೆಟ್ಟಿ, ರಘುರಾಮ್ ಶೆಟ್ಟಿ, ಉಳ್ತೂರು ಮೋಹನದಾಸ್ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಉಮಾ ಕೃಷ್ಣ ಶೆಟ್ಟಿ, ಮನೋರಮ ಎನ್.ಬಿ. ಶೆಟ್ಟಿ, ಚಿತ್ರ ಆರ್. ಶೆಟ್ಟಿ, ಲತಾ ಜಯರಾಮ್ ಶೆಟ್ಟಿ, ಪ್ರಕಾಶ್ ಶೆಟ್ಟಿ ನಲ್ಯಗುತ್ತು, ಸುಕುಮಾರ್ ಎಸ್. ಶೆಟ್ಟಿ, ಭಾಸ್ಕರ್ ಡಿ. ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…
ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ…