ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇದರಿಂದ ಹಿಂದೂ ವಿದ್ಯಾರ್ಥಿಗಳಿಗೆ ದಸರಾ ಹಬ್ಬದ ಸಂಭ್ರಮದಿಂದ ವಂಚನೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅ.3ರಿಂದ 21ರವರೆಗೆ ದಸರಾ ರಜೆ ಘೋಷಿಸಿದೆ. ಆದರೆ, ಕೆಲವು ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗಳು ಇದೇ ಅವಧಿಯಲ್ಲಿ ಪರೀಕ್ಷೆ ಹಾಗೂ ತರಗತಿಗಳನ್ನು ನಡೆಸುತ್ತಿವೆ ಎಂದು ಆರೋಪಿಸಿದರು.
ದಸರಾ ರಜೆಯನ್ನು ಕಡಿತಗೊಳಿಸಿ, ಕ್ರಿಸ್‌ಮಸ್ ಸಂದರ್ಭದಲ್ಲಿ ಹೆಚ್ಚುವರಿ ರಜೆ ನೀಡುವ ಕ್ರಮ ಸರಿಯಲ್ಲ ಎಂದು ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿದರು. ಈ ಬಾರಿಯೂ ದಸರಾ ರಜೆಯ ಅವಧಿಯಲ್ಲಿ ಶಾಲೆಗಳನ್ನು ನಡೆಸಿದರೆ ರಾಜ್ಯಾದ್ಯಂತ ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…
ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ…