ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಎನ್ನಲಾದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕಲ್ಲಡ್ಕ ಫ್ಲೈಓವರ್ ಮೇಲೆ ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ ಆರುಕ್ಕೂ ಅಧಿಕ ದನಗಳು ಪತ್ತೆಯಾಗಿವೆ ಎನ್ನಲಾಗಿದೆ. ಬಳಿಕ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ದನಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ದನಗಳನ್ನು ಎಲ್ಲಿಂದ ತರಲಾಗಿತ್ತು ಹಾಗೂ ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಘಟನೆ ಕುರಿತು ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

error: Content is protected !!