ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್–ಅಡ್ಡಹೊಳೆ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿರುವ ಬೆನ್ನಲ್ಲೇ, ಮಾಣಿ ಭಾಗದಲ್ಲಿ ಮೈಸೂರು, ಪುತ್ತೂರು ಹಾಗೂ ಸುಳ್ಯ ಕಡೆಗೆ ತೆರಳುವ ವಾಹನ ಸವಾರರಿಗೆ ಸೂಕ್ತ ಮಾರ್ಗಸೂಚಿ ಫಲಕಗಳ ಕೊರತೆ ಗೊಂದಲಕ್ಕೆ ಕಾರಣವಾಗುತ್ತಿದೆ.

ಕಿರಿದಾದ ಸರ್ವೀಸ್ ರಸ್ತೆಗೆ ನೀಡಲಾಗಿರುವ ಪ್ರವೇಶ ಸ್ಥಳ ಸ್ಪಷ್ಟವಾಗಿ ಗೋಚರಿಸದಿರುವುದು ಹಾಗೂ ಸಮರ್ಪಕ ದಿಕ್ಕು ಸೂಚನಾ ಫಲಕಗಳನ್ನು ಅಳವಡಿಸದಿರುವುದು ಅಪಘಾತದ ಅಪಾಯವನ್ನು ಹೆಚ್ಚಿಸಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

ಕೆ.ಎನ್.ಆರ್.ಸಿ. ಕಂಪೆನಿ ಕಾಮಗಾರಿ ನಿರ್ವಹಿಸುತ್ತಿರುವ ಈ ಭಾಗದಲ್ಲಿ, ಮಾಣಿ ಪೇಟೆ ಮೂಲಕ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಸರ್ವೀಸ್ ರಸ್ತೆಯ ಪ್ರವೇಶ ಸ್ಥಳ ವಾಹನ ಸವಾರರಿಗೆ ಸುಲಭವಾಗಿ ಕಾಣಿಸುತ್ತಿಲ್ಲ. ಮಾಣಿ ಪೇಟೆಗೆ ತಿರುಗಬೇಕಾದ ಸ್ಥಳದಲ್ಲಿಯೂ ಸೂಕ್ತ ದಿಕ್ಕು ಸೂಚನಾ ಫಲಕ ಇಲ್ಲದಿರುವುದರಿಂದ ಹೊರ ಜಿಲ್ಲೆ ಹಾಗೂ ದೂರದ ಊರುಗಳಿಂದ ಆಗಮಿಸುವ ವಾಹನ ಸವಾರರು ಗೊಂದಲಕ್ಕೀಡಾಗುತ್ತಿದ್ದಾರೆ.

ಮೈಸೂರು, ಪುತ್ತೂರು ಹಾಗೂ ಸುಳ್ಯ ಭಾಗಗಳಿಗೆ ತೆರಳುವ ಹಲವು ವಾಹನಗಳು ಮಾಣಿ ಅಂಡರ್‌ಪಾಸ್ ಮೂಲಕ ಉಪ್ಪಿನಂಗಡಿ ರಸ್ತೆಯತ್ತ ಸಾಗುತ್ತಿವೆ. ಮುಂದೆ ಸಾಗಿದ ಬಳಿಕ ಸರ್ವೀಸ್ ರಸ್ತೆಯ ಪ್ರವೇಶ ಕಂಡುಬಂದಾಗ ಕೆಲವರು ಅಲ್ಲಿಂದಲೇ ವಾಹನಗಳನ್ನು ತಿರುಗಿಸಿಕೊಂಡು ಹಿಂದಕ್ಕೆ ಬರುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ವಿರುದ್ಧ ದಿಕ್ಕಿನಿಂದ ಆಗಮಿಸುವ ವಾಹನಗಳೊಂದಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯ ಎದುರಾಗಿದೆ. ಹೀಗಾಗಿ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಮಾಣಿ ಭಾಗದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಸ್ಪಷ್ಟವಾದ ದಿಕ್ಕು ಸೂಚನಾ ಫಲಕಗಳನ್ನು ಅಳವಡಿಸಿ, ಸರ್ವೀಸ್ ರಸ್ತೆ ಪ್ರವೇಶವನ್ನು ಸುಲಭವಾಗಿ ಗುರುತಿಸುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

error: Content is protected !!