ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್–ಅಡ್ಡಹೊಳೆ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿರುವ ಬೆನ್ನಲ್ಲೇ, ಮಾಣಿ ಭಾಗದಲ್ಲಿ ಮೈಸೂರು, ಪುತ್ತೂರು ಹಾಗೂ ಸುಳ್ಯ ಕಡೆಗೆ ತೆರಳುವ ವಾಹನ ಸವಾರರಿಗೆ ಸೂಕ್ತ ಮಾರ್ಗಸೂಚಿ ಫಲಕಗಳ ಕೊರತೆ ಗೊಂದಲಕ್ಕೆ ಕಾರಣವಾಗುತ್ತಿದೆ.
ಕಿರಿದಾದ ಸರ್ವೀಸ್ ರಸ್ತೆಗೆ ನೀಡಲಾಗಿರುವ ಪ್ರವೇಶ ಸ್ಥಳ ಸ್ಪಷ್ಟವಾಗಿ ಗೋಚರಿಸದಿರುವುದು ಹಾಗೂ ಸಮರ್ಪಕ ದಿಕ್ಕು ಸೂಚನಾ ಫಲಕಗಳನ್ನು ಅಳವಡಿಸದಿರುವುದು ಅಪಘಾತದ ಅಪಾಯವನ್ನು ಹೆಚ್ಚಿಸಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ಕೆ.ಎನ್.ಆರ್.ಸಿ. ಕಂಪೆನಿ ಕಾಮಗಾರಿ ನಿರ್ವಹಿಸುತ್ತಿರುವ ಈ ಭಾಗದಲ್ಲಿ, ಮಾಣಿ ಪೇಟೆ ಮೂಲಕ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಸರ್ವೀಸ್ ರಸ್ತೆಯ ಪ್ರವೇಶ ಸ್ಥಳ ವಾಹನ ಸವಾರರಿಗೆ ಸುಲಭವಾಗಿ ಕಾಣಿಸುತ್ತಿಲ್ಲ. ಮಾಣಿ ಪೇಟೆಗೆ ತಿರುಗಬೇಕಾದ ಸ್ಥಳದಲ್ಲಿಯೂ ಸೂಕ್ತ ದಿಕ್ಕು ಸೂಚನಾ ಫಲಕ ಇಲ್ಲದಿರುವುದರಿಂದ ಹೊರ ಜಿಲ್ಲೆ ಹಾಗೂ ದೂರದ ಊರುಗಳಿಂದ ಆಗಮಿಸುವ ವಾಹನ ಸವಾರರು ಗೊಂದಲಕ್ಕೀಡಾಗುತ್ತಿದ್ದಾರೆ.
ಮೈಸೂರು, ಪುತ್ತೂರು ಹಾಗೂ ಸುಳ್ಯ ಭಾಗಗಳಿಗೆ ತೆರಳುವ ಹಲವು ವಾಹನಗಳು ಮಾಣಿ ಅಂಡರ್‌ಪಾಸ್ ಮೂಲಕ ಉಪ್ಪಿನಂಗಡಿ ರಸ್ತೆಯತ್ತ ಸಾಗುತ್ತಿವೆ. ಮುಂದೆ ಸಾಗಿದ ಬಳಿಕ ಸರ್ವೀಸ್ ರಸ್ತೆಯ ಪ್ರವೇಶ ಕಂಡುಬಂದಾಗ ಕೆಲವರು ಅಲ್ಲಿಂದಲೇ ವಾಹನಗಳನ್ನು ತಿರುಗಿಸಿಕೊಂಡು ಹಿಂದಕ್ಕೆ ಬರುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದರಿಂದ ವಿರುದ್ಧ ದಿಕ್ಕಿನಿಂದ ಆಗಮಿಸುವ ವಾಹನಗಳೊಂದಿಗೆ ಮುಖಾಮುಖಿ ಡಿಕ್ಕಿಯಾಗುವ ಅಪಾಯ ಎದುರಾಗಿದೆ. ಹೀಗಾಗಿ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಮಾಣಿ ಭಾಗದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಸ್ಪಷ್ಟವಾದ ದಿಕ್ಕು ಸೂಚನಾ ಫಲಕಗಳನ್ನು ಅಳವಡಿಸಿ, ಸರ್ವೀಸ್ ರಸ್ತೆ ಪ್ರವೇಶವನ್ನು ಸುಲಭವಾಗಿ ಗುರುತಿಸುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…