ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ.
ಮೃತರನ್ನು ಹಿರ್ಗಾನ ಗ್ರಾಮದ ಭರತ್ ಪೂಜಾರಿ ಹಾಗೂ ಹರ್ಷನ್ ಆಚಾರ್ಯ ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದೂರದ ದುರ್ಗಮ ದಾರಿಯಲ್ಲಿ ನಡೆದು ಸುವರ್ಣ ನದಿಗೆ ತೆರಳಿದ್ದರು ಎನ್ನಲಾಗಿದೆ.
ಈ ವೇಳೆ ಭರತ್ ಹಾಗೂ ಹರ್ಷನ್ ಆಳವಾದ ನೀರಿನ ಪ್ರದೇಶಕ್ಕೆ ತೆರಳಿದಾಗ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಕಿ.ಮೀ. ನಡೆದು ಸ್ಥಳಕ್ಕೆ ತಲುಪಿದ್ದಾರೆ.
ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಠಾಣಾಧಿಕಾರಿ ಸಂಜೀವ ದೇವಾಡಿಗ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಮೃತ ಭರತ್ ಪೇಂಟಿಂಗ್ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ಸ್ವಂತ ಮನೆ ನಿರ್ಮಿಸುವ ಕನಸು ಹೊಂದಿದ್ದ ಅವರ ಮನೆಯ ಕಾಮಗಾರಿ ಸ್ಲ್ಯಾಬ್ ಹಂತ ತಲುಪಿತ್ತು. ಶೀಘ್ರದಲ್ಲೇ ಗೃಹಪ್ರವೇಶ ನಡೆಸುವ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಭರತ್ ಅವರ ಅಕಾಲಿಕ ಸಾವು ಆಘಾತ ತಂದಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…