ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸೆ.24ರಿಂದ 27ರವರೆಗೆ ದೇಶದ ವಿವಿಧೆಡೆ ಒಟ್ಟು 542 ಮಳೆ ಸಂಬಂಧಿತ ವಿಪತ್ತು ಘಟನೆಗಳು ವರದಿಯಾಗಿವೆ. ಭೂಕುಸಿತ, ಪ್ರವಾಹ ಹಾಗೂ ಭಾರೀ ಮಳೆಯಿಂದ ಸಂಭವಿಸಿದ ವಿವಿಧ ಅವಘಡಗಳು ಇದರಲ್ಲಿ ಸೇರಿವೆ ಎಂದು ನೇಪಾಳದ ರಾಷ್ಟ್ರೀಯ ವಿಪತ್ತು ಶಮನ ಹಾಗೂ ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ವರದಿಯ ಪ್ರಕಾರ, 304 ಭೂಕುಸಿತ ಪ್ರಕರಣಗಳಲ್ಲಿ 20 ಮಂದಿ ಮೃತಪಟ್ಟಿದ್ದಾರೆ. 87 ಪ್ರವಾಹ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದು, ಭಾರೀ ಮಳೆಯಿಂದ ಉಂಟಾದ 151 ಇತರ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದಾರೆ.
ನಿರಂತರ ಮಳೆಯಿಂದಾಗಿ 227 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿವೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ 31 ಸೇತುವೆಗಳಿಗೂ ಹಾನಿಯಾಗಿದೆ.
ಮಳೆ ಹಾಗೂ ಪ್ರಕೃತಿ ವಿಕೋಪದಿಂದಾಗಿ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸಂತ್ರಸ್ತರ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗಳನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ…