ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಘಟನೆ ಮಂಗಳವಾರ ಬೆಳಗ್ಗೆ ಸುಮಾರು 10 ಗಂಟೆಗೆ ನಡೆದಿದೆ ಎನ್ನಲಾಗಿದೆ. ಕೋರ್ಟ್ ರಸ್ತೆಯಿಂದ ಬರುತ್ತಿದ್ದ ಗೂಡ್ಸ್ ಆಟೋ ರಿಕ್ಷಾ, ಕರಂಗಲ್ಪಾಡಿ ಮುಖ್ಯ ರಸ್ತೆಯಿಂದ ಕೋರ್ಟ್ ರಸ್ತೆಗೆ ತಿರುವು ಪಡೆಯುತ್ತಿದ್ದ ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಕಾರನ್ನು ನ್ಯಾಯಾಧೀಶ ವಿನಯ್ ಅವರೇ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಗೂಡ್ಸ್ ಆಟೋ ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಚಂದ್ರ ಕೆ. ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
ಅಪಘಾತದ ವೇಳೆ ಪಲ್ಟಿಯಾದ ಗೂಡ್ಸ್ ಆಟೋ ಅಲ್ಲೇ ಇದ್ದ ಸ್ಕೂಟರ್‌ಗೆ ಕೂಡ ಡಿಕ್ಕಿಯಾಗಿದ್ದು, ಸ್ಕೂಟರ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ನ್ಯಾಯಾಧೀಶ ವಿನಯ್ ಅವರಿಗೂ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮೃತ ಚಂದ್ರ ಅವರು ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿಯಾಗಿದ್ದು, ಮಂಗಳೂರಿನ ಕಲ್ಪನಾ ಸ್ವೀಟ್ಸ್‌ಗೆ ಸೇರಿದ ಗೂಡ್ಸ್ ಆಟೋದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆಟೋ ನೇರವಾಗಿ ಬಂದು ಕಾರಿಗೆ ಡಿಕ್ಕಿಯಾಗಿರುವುದು ಕಂಡುಬಂದಿದೆ ಎನ್ನಲಾಗಿದೆ. ಆಟೋ ಚಾಲಕನಿಗೆ ಏಕಾಏಕಿ ಕಣ್ಣು ಮಂಜಾಗಿರುವುದು ಅಥವಾ ಯಾವುದಾದರೂ ಸಮಸ್ಯೆ ಉಂಟಾಗಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬ್ರೇಕ್ ಹಾಕಿದ್ದರೆ ಆಟೋದ ಮುಂಭಾಗ ಈ ಪ್ರಮಾಣದಲ್ಲಿ ಅಪ್ಪಚ್ಚಿಯಾಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯಾಯಾಧೀಶ ವಿನಯ್ ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ…