ಬಂಟ್ವಾಳ : ಯುನೈಟೆಡ್ ಕಿಂಗ್‌ಡಂನಿಂದ ಉಡುಗೊರೆ ಕಳುಹಿಸುವುದಾಗಿ ಹೇಳಿ 5.90 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಡಾ. ಫ್ರಾಕ್ಲಿನ್ ಪ್ಯಾಟ್ರಿಕ್ ಎಂದು ಪರಿಚಯಿಸಿಕೊಂಡು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವೈದ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದ. ಕೆಲವು ದಿನಗಳ ಬಳಿಕ ಆತ ತನ್ನ ಮಗಳ ಬರ್ತ್‌ಡೇಗೆ ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ತಿಳಿಸಿದ.ಜು.24ರಂದು ಇನ್ನೋರ್ವ ಅಪರಿಚಿತ ವ್ಯಕ್ತಿಯು ತನಗೆ ಕರೆ ಮಾಡಿ ‘ನಿಮಗೆ ಪಾರ್ಸೆಲ್ ಬಂದಿದ್ದು, ದಿಲ್ಲಿಗೆ ತಲುಪಿದೆ. ಅದರ ಪ್ರೊಸೆಸಿಂಗ್ ಶುಲ್ಕ ಪಾವತಿಸಬೇಕು’ ಎಂದಿದ್ದ. ಅದನ್ನು ನಂಬಿದ ತಾನು ತನ್ನ ಖಾತೆಯಿಂದ 40,000 ರೂ. ಗಳನ್ನು ಪ್ರೊಸೆಸಿಂಗ್ ಶುಲ್ಕವೆಂದು ಗೂಗಲ್‌ಪೇ ಮಾಡಿದ್ದೆ. ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ವಿವಿಧ ಕಾರಣ ನೀಡಿ ಹಂತ ಹಂತವಾಗಿ 5.90 ಲಕ್ಷ ರೂ.ವನ್ನು ಪಡೆದು ವಂಚಿಸಿದ್ದಾನೆ ಎಂದು ವಂಚನೆಗೊಳಗಾದ ವ್ಯಕ್ತಿ ದೂರು ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…