ಕರಾವಳಿ

ಉಡುಗೊರೆ ಹೆಸರಲ್ಲಿ ಲಕ್ಷ ಲಕ್ಷ ದೋಖಾ

ಬಂಟ್ವಾಳ : ಯುನೈಟೆಡ್ ಕಿಂಗ್‌ಡಂನಿಂದ ಉಡುಗೊರೆ ಕಳುಹಿಸುವುದಾಗಿ ಹೇಳಿ 5.90 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್ ಮೂಲಕ ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಡಾ. ಫ್ರಾಕ್ಲಿನ್ ಪ್ಯಾಟ್ರಿಕ್ ಎಂದು ಪರಿಚಯಿಸಿಕೊಂಡು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ವೈದ್ಯನಾಗಿದ್ದೇನೆ ಎಂದು ಹೇಳಿಕೊಂಡಿದ್ದ. ಕೆಲವು ದಿನಗಳ ಬಳಿಕ ಆತ ತನ್ನ ಮಗಳ ಬರ್ತ್‌ಡೇಗೆ ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ತಿಳಿಸಿದ.ಜು.24ರಂದು ಇನ್ನೋರ್ವ ಅಪರಿಚಿತ ವ್ಯಕ್ತಿಯು ತನಗೆ ಕರೆ ಮಾಡಿ ‘ನಿಮಗೆ ಪಾರ್ಸೆಲ್ ಬಂದಿದ್ದು, ದಿಲ್ಲಿಗೆ ತಲುಪಿದೆ. ಅದರ ಪ್ರೊಸೆಸಿಂಗ್ ಶುಲ್ಕ ಪಾವತಿಸಬೇಕು’ ಎಂದಿದ್ದ. ಅದನ್ನು ನಂಬಿದ ತಾನು ತನ್ನ ಖಾತೆಯಿಂದ 40,000 ರೂ. ಗಳನ್ನು ಪ್ರೊಸೆಸಿಂಗ್ ಶುಲ್ಕವೆಂದು ಗೂಗಲ್‌ಪೇ ಮಾಡಿದ್ದೆ. ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ವಿವಿಧ ಕಾರಣ ನೀಡಿ ಹಂತ ಹಂತವಾಗಿ 5.90 ಲಕ್ಷ ರೂ.ವನ್ನು ಪಡೆದು ವಂಚಿಸಿದ್ದಾನೆ ಎಂದು ವಂಚನೆಗೊಳಗಾದ ವ್ಯಕ್ತಿ ದೂರು ನೀಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಜ್ಯೋತಿಷ್ಯದ ನೆಪದಲ್ಲಿ ₹40 ಲಕ್ಷ ವಂಚನೆ: ಎಐ ವಿಡಿಯೋ ಮೂಲಕ ಅಪಘಾತದ ನಾಟಕ!

ಜ್ಯೋತಿಷ್ಯ ಹೇಳುವ ನೆಪದಲ್ಲಿ 62 ವರ್ಷದ ಶಾಂತಮ್ಮ ಅವರನ್ನು ನಂಬಿಸಿ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ…

7 hours ago

ಉಡುಪಿ: ನಿಟ್ಟೆ ಹಲಸು ಸಂಸ್ಕರಣಾ ಘಟಕ ನಾಮಕಾವಸ್ಥೆ: ಅನುದಾನದ ಬಳಕೆ ಬಗ್ಗೆ ಅನುಮಾನ…!

ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ…

1 day ago

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ನೇಮಕ?

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ…

1 day ago

ರಾಂಚಿ: ಮೈದಾನದಲ್ಲಿ ಅನುಚಿತ ವರ್ತನೆ: ವೆಸ್ಟ್ ಇಂಡೀಸ್‌ನ ಪೊವೆಲ್, ರದರ್‌ಫೋರ್ಡ್‌ಗೆ ಐಸಿಸಿ ಎಚ್ಚರಿಕೆ

ಭಾರತದ ವಿರುದ್ಧ ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ವೆಸ್ಟ್ ಇಂಡೀಸ್ ತಂಡದ ಆಟಗಾರರಾದ…

1 day ago

ರಾಜ್‌ಕೋಟ್: ರಣಜಿ ಟ್ರೋಫಿಯಲ್ಲಿ ರವೀಂದ್ರ ಜಡೇಜಾ ಶತಕದ ಅಬ್ಬರ; ನ್ಯೂಜಿಲೆಂಡ್ ಸರಣಿಗೆ ಭರ್ಜರಿ ತಾಲೀಮು

ಭಾರತ ತಂಡದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ದೇಶಿ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್‌ಕೋಟ್‌ನ ನಿರಂಜನ್…

1 day ago

ಬಂಟ್ವಾಳ: ಯು.ಟಿ. ಖಾದರ್ ಜನ್ಮದಿನ: ಬಂಟ್ವಾಳ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರ…

1 day ago