ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸದಿರುವುದು ಇದಕ್ಕೆ ಕಾರಣ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ.

ಮಂಗಳಗಂಗೋತ್ರಿಯಲ್ಲಿ ಮಂಗಳವಾರ ನಡೆದ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸ್ನಾತಕೋತ್ತರ ಕೋರ್ಸ್ಗಳನ್ನು ನಡೆಸಲು ಕನಿಷ್ಠ 15 ವಿದ್ಯಾರ್ಥಿಗಳ ಪ್ರವೇಶ ಅಗತ್ಯವಿದೆ ಎಂದು ತಿಳಿಸಿದರು.
ಆದರೆ ಅನಾಲಿಟಿಕಲ್ ಕೆಮಿಸ್ಟ್ರಿ, ಎಲೆಕ್ಟ್ರಾನಿಕ್ಸ್, ಸೈಬರ್ ಸೆಕ್ಯುರಿಟಿ, ಸಂಖ್ಯಾವಿಜ್ಞಾನ, ಪರಿಸರ ವಿಜ್ಞಾನ, ವಸ್ತು ವಿಜ್ಞಾನ ಮತ್ತು ಜಿಯೋಇನ್ಫರ್ಮ್ಯಾಟಿಕ್ಸ್, ಬಯೋಸೈನ್ಸ್ ಎಂ.ಎಸ್ಸಿ., ಎಂ.ಎಡ್., ಎಂ.ಕಾಂ. ಎಚ್ಆರ್ಡಿ, ಎಂ.ಸಿ.ಜೆ., ಸಮಾಜಶಾಸ್ತ್ರ, ತುಳು, ಕೊಂಕಣಿ, ಹಿಂದಿ ಹಾಗೂ ಸಂಸ್ಕೃತ ಎಂ.ಎ. ಕೋರ್ಸ್ಗಳಿಗೆ ಅಗತ್ಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿಲ್ಲ ಎಂದು ಅವರು ಹೇಳಿದರು.
ಈ ಹಿನ್ನೆಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಈ 16 ಸ್ನಾತಕೋತ್ತರ ಕೋರ್ಸ್ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ತಿಳಿಸಿದರು.



