ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಮೃತರನ್ನು ವಿಠ್ಠಲ್ ನಾಯಕ್ ಹಾಗೂ ಭವ್ಯಾ ಅಲಿಯಾಸ್ ನಿಶ್ಮಿತಾ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಠ್ಠಲ್ ನಾಯಕ್ ಅವರ ಪತ್ನಿಗೆ ಭವ್ಯಾ ಜೊತೆ ಸೇರಿ ಇಂಜೆಕ್ಷನ್‌ಗಳ ಮೂಲಕ ವಿಷಪ್ರಾಶನಗೊಳಿಸಿ ಕೊಲೆ ಮಾಡಲು ಯತ್ನಿಸಿದ ಆರೋಪ ಇವರಿಬ್ಬರ ಮೇಲಿತ್ತು. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.
ಭವ್ಯಾ ಹಾಗೂ ವಿಠ್ಠಲ್ ನಾಯಕ್ ನಡುವೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ನರ್ಸ್ ಎಂದು ಪರಿಚಯಿಸಿಕೊಂಡು ವಿಠ್ಠಲ್ ನಾಯಕ್ ಅವರ ಪತ್ನಿಗೆ ಇಂಜೆಕ್ಷನ್ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಘಟನೆ ಬಳಿಕ ಇಬ್ಬರೂ ನಾಪತ್ತೆಯಾಗಿದ್ದು, ಕೊಲ್ಲೂರು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದರು.
ಈ ಮಧ್ಯೆ ಬೈಂದೂರು ಠಾಣೆ ವ್ಯಾಪ್ತಿಯ ಗೋಳಿಹೊಳೆ ಪ್ರದೇಶದಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಇಬ್ಬರೂ ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮಾಹಿತಿ ತಿಳಿದು ಬೈಂದೂರು ಪೊಲೀಸರು ಹಾಗೂ ಸೋಕೋ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಬೈಂದೂರು ಸಿಪಿಐ ಶಿವಕುಮಾರ್, ಕೊಲ್ಲೂರು ಪಿಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಬೈಂದೂರು ಪಿಎಸ್‌ಐ ಸುನೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ…