ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿಯಲ್ಲಿ ನಡೆದಿದೆ.

ಮೃತರನ್ನು ಬಾಳ್ತಿಲ ನಿವಾಸಿ ಹರೀಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಅವರು, ಸಂಜೆ ಕೆಲಸ ಮುಗಿಸಿ ಕಲ್ಲಡ್ಕ ಕಡೆಯಿಂದ ಬಸ್‌ನಲ್ಲಿ ಮನೆಗೆ ತೆರಳುತ್ತಿದ್ದರು.

ದಾಸಕೋಡಿಯಲ್ಲಿ ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಹರೀಶ್ ನಾಯ್ಕ್ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ಹಾಗೂ ಕಾರಿನ ಚಾಲಕನ ಕುರಿತು ಮಾಹಿತಿ ಕಲೆಹಾಕಲಾಗುತ್ತಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!