ಬಸ್ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿಯಲ್ಲಿ ನಡೆದಿದೆ.
ಮೃತರನ್ನು ಬಾಳ್ತಿಲ ನಿವಾಸಿ ಹರೀಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಅವರು, ಸಂಜೆ ಕೆಲಸ ಮುಗಿಸಿ ಕಲ್ಲಡ್ಕ ಕಡೆಯಿಂದ ಬಸ್ನಲ್ಲಿ ಮನೆಗೆ ತೆರಳುತ್ತಿದ್ದರು.
ದಾಸಕೋಡಿಯಲ್ಲಿ ಬಸ್ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಹರೀಶ್ ನಾಯ್ಕ್ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ಹಾಗೂ ಕಾರಿನ ಚಾಲಕನ ಕುರಿತು ಮಾಹಿತಿ ಕಲೆಹಾಕಲಾಗುತ್ತಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ ನಡೆಸುವ ಮೂಲಕ ತುರ್ತು ಪರಿಸ್ಥಿತಿಯನ್ನು ಎದುರಿಸುವ ಸನ್ನದ್ಧತೆಯನ್ನು ಪರಿಶೀಲಿಸಲಾಯಿತು.…
ಕಾಸರಗೋಡು ನಗರಸಭೆಯ ಉದ್ಯೋಗಿಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರದ ತಟ್ಟಾಚೇರಿಯಲ್ಲಿ ನಡೆದಿದೆ. ರಮ್ಯಾ (ಹೆಸರು) ಮೃತಪಟ್ಟ…