ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ ಇರಾನ್ ಮೂಲದ ದೋಣಿಯಿಂದ 526 ಕೆಜಿ ಹೆರಾಯಿನ್ ಮತ್ತು ಮೆಥಾಂಫೆಟಮೈನ್ ಮಾದಕವಸ್ತುಗಳನ್ನು ವಶಪಡಿಸಿಕೊಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ₹3 ಸಾವಿರ ಕೋಟಿಗೂ ಅಧಿಕ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಪ್ತಚರ ಮಾಹಿತಿ ಆಧರಿಸಿ ಸೆ.25ರಂದು ಕರಾವಳಿ ಕಾವಲು ಪಡೆ ಸಮುದ್ರ ಮತ್ತು ವಾಯು ಮಾರ್ಗದ ಮೂಲಕ ಅನುಮಾನಾಸ್ಪದ ದೋಣಿಯ ಮೇಲೆ ನಿಗಾ ಇರಿಸಿತ್ತು. ಬಳಿಕ ಬೆನ್ನಟ್ಟಿದ ಪಡೆಗಳು ಲಕ್ಷದ್ವೀಪದ ಪಶ್ಚಿಮ ಭಾಗದಲ್ಲಿ ಇರಾನ್ ಮೂಲದ ದೋಣಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಭಾರಿ ಪ್ರಮಾಣದ ಮಾದಕವಸ್ತು ಪತ್ತೆಯಾಗಿದೆ.

ಕಾರ್ಯಾಚರಣೆಯಲ್ಲಿ ದೋಣಿಯಲ್ಲಿದ್ದ ಐವರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಮಾದಕವಸ್ತು, ದೋಣಿ ಹಾಗೂ ಸಿಬ್ಬಂದಿಯನ್ನು ಹೆಚ್ಚಿನ ವಿಚಾರಣೆ ಮತ್ತು ಕಾನೂನು ಪ್ರಕ್ರಿಯೆಗಾಗಿ ಮುಂಬೈಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾದಕವಸ್ತು ಸಾಗಾಟದ ಹಿಂದೆ ಇರುವ ಜಾಲ ಹಾಗೂ ಈ ಸರಕನ್ನು ಯಾರಿಗೆ ತಲುಪಿಸಲು ಉದ್ದೇಶಿಸಲಾಗಿತ್ತು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ ಗುಜರಾತ್ ATS, ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಕೇಂದ್ರ ಗುಪ್ತಚರ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿವೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

error: Content is protected !!