ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 122ನೇ ಜನ್ಮದಿನದ ಹಿನ್ನೆಲೆಯಲ್ಲಿ ವಿಜಯ್ ಘಾಟ್‌ಗೆ ತೆರಳಿ ಗೌರವ ಸಲ್ಲಿಸಿದರು.
ರಾಜಘಾಟ್‌ನಲ್ಲಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಮಹಾತ್ಮ ಗಾಂಧೀಜಿಗೆ ಗೌರವ ಸಲ್ಲಿಸಿದರು. ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಮಾನವೀಯತೆಯ ಸಂದೇಶವನ್ನು ಸ್ಮರಿಸಲಾಯಿತು.
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಗಾಂಧೀಜಿಯವರಿಗೆ ಗೌರವ ಸಲ್ಲಿಸಿದರು. ವಿಶ್ವದ ಹಲವು ಭಾಗಗಳಲ್ಲಿ ಸಂಘರ್ಷದ ವಾತಾವರಣ ಇರುವ ಸಂದರ್ಭದಲ್ಲಿ ಗಾಂಧೀಜಿಯವರ ಶಾಂತಿ ಮತ್ತು ಅಹಿಂಸೆಯ ಸಂದೇಶ ಇನ್ನಷ್ಟು ಪ್ರಸ್ತುತವಾಗಿದೆ ಎಂದು ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
ದೇಶಾದ್ಯಂತ ಗಾಂಧಿ ಜಯಂತಿಯನ್ನು ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದ್ದು, ಶಾಂತಿ, ಅಹಿಂಸೆ, ಸ್ವಚ್ಛತೆ ಹಾಗೂ ಸ್ವದೇಶಿ ಚಿಂತನೆಗಳಿಗೆ ಒತ್ತು ನೀಡಲಾಗುತ್ತಿದೆ. ಪ್ರಧಾನಿ ಮೋದಿ ಅವರು ಗಾಂಧಿ ಜಯಂತಿ ಸಂದರ್ಭದಲ್ಲಿ ಖಾದಿ ಸೇರಿದಂತೆ ಸ್ವದೇಶಿ ಉತ್ಪನ್ನಗಳನ್ನು ಉತ್ತೇಜಿಸುವಂತೆ ಕರೆ ನೀಡಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…