ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನ ರಾಜು (23) ಎಂದು ಗುರುತಿಸಲಾಗಿದೆ.
ಆ.26ರಂದು ರಾತ್ರಿ ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿರುವ ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟುಹೋಗಿತ್ತು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



