ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಮುಗು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅವರ ಪತ್ನಿ ಖೈರುನ್ನೀಸಾ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖೈರುನ್ನೀಸಾ ಅವರ ಆರೋಗ್ಯ ತಪಾಸಣೆಗಾಗಿ ವೈದ್ಯರನ್ನು ಭೇಟಿಯಾಗಲು ದಂಪತಿ ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಮುಗುರೋಡ್ ಬಳಿ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಕಾರು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ದಂಪತಿ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಅಶ್ರಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖೈರುನ್ನೀಸಾ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ಕುರಿತು ತನಿಖೆ ಮುಂದುವರಿಸಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…
ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಪುಷ್ಪ ನಮನ…