ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಖಾದಿ ಹಾರ ಹಾಗೂ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಲಾಯಿತು. ಬಳಿಕ ಮಾತನಾಡಿದ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗಾಂಧೀಜಿಯವರ ಬದುಕು ಇತರರಿಗೆ ಮಾದರಿಯಾಗಿದೆ ಎಂದರು.
ಗಾಂಧೀಜಿಯವರು ಮಾತನಾಡುವುದಕ್ಕಿಂತಲೂ ಇತರರ ಮಾತುಗಳನ್ನು ಗೌರವದಿಂದ ಆಲಿಸುತ್ತಿದ್ದರು. ಪ್ರತಿಯೊಬ್ಬ ವ್ಯಕ್ತಿಗೂ ಗೌರವ ನೀಡುವ ಅವರ ಗುಣವೇ ಸ್ವಾತಂತ್ರ್ಯ ಹೋರಾಟದಲ್ಲಿ ಅವರನ್ನು ದೇಶದ ನಾಯಕನನ್ನಾಗಿ ಮಾಡಿತು ಎಂದು ಮಂಜುನಾಥ್ ಭಂಡಾರಿ ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಹಾಗೂ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಅರುಣ್ ಕೆ. ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…