ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಸೆ.29ರಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ಘಟನೆ ನಡೆದಿದ್ದು, ಕೃತ್ಯದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಸ್ಥಳೀಯರು ನೀಡಿದ ದೂರಿನ ಆಧಾರದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…