ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ.
ತಮಿಳುನಾಡಿನ ತಿರುಪ್ಪೂರ್ ಮೂಲದ ಮಹಿಳೆಯೊಬ್ಬರು ತನ್ನ ಸ್ನೇಹಿತನೊಂದಿಗೆ ತ್ರಿಶೂರ್‌ಗೆ ತೆರಳಿ ಅಲ್ಲಿನ ಲಾಡ್ಜ್‌ನಲ್ಲಿ ತಂಗಿದ್ದರು. ಈ ವೇಳೆ ಪೊಲೀಸರ ಸೋಗಿನಲ್ಲಿ ಬಂದ ಐವರು ದುಷ್ಕರ್ಮಿಗಳು ಕೊಠಡಿಗೆ ನುಗ್ಗಿ ಇಬ್ಬರನ್ನೂ ಕಟ್ಟಿಹಾಕಿ ಅಪಹರಿಸಿದ್ದರು ಎನ್ನಲಾಗಿದೆ.
ಬಳಿಕ ಕಾರಿನಲ್ಲಿ ತಮಿಳುನಾಡಿನತ್ತ ಕರೆದೊಯ್ಯುವ ವೇಳೆ ಮಹಿಳೆಯ ಸ್ನೇಹಿತನ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಿರುಪ್ಪೂರ್‌ನ ಆಸ್ಪತ್ರೆಯೊಂದರ ಆವರಣದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ ಮಹಿಳೆಯನ್ನು ಮತ್ತೊಂದು ಕಾರಿನಲ್ಲಿ ಕರೆದೊಯ್ದ ಇಬ್ಬರು ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಆರಂಭದಲ್ಲಿ ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ತ್ರಿಶೂರ್ ನಗರ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು.
ಪ್ರಕರಣದ ತನಿಖೆ ವೇಳೆ ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿಯೇ ಕೃತ್ಯಕ್ಕೆ ಸುಪಾರಿ ನೀಡಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿಯ ಫೋನ್ ಲೊಕೇಶನ್‌ನ್ನು ಪತ್ತೆಹಚ್ಚಿ ಅದರ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದಳು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…