ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ ರಾಜ್ಯಗಳ ಮಾದರಿಯಲ್ಲಿ ಅದನ್ನು ತಕ್ಷಣ ಹೆಚ್ಚಿಸಬೇಕು ಎಂದು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಆಗ್ರಹಿಸಿದ್ದಾರೆ.

ಏಷ್ಯನ್ ಗೇಮ್ಸ್‌ನ 400 ಮೀ. ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದ ಬಳಿಕ ಮಂಗಳೂರಿಗೆ ಆಗಮಿಸಿದ ಅವರು, ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹರಿಯಾಣ, ಪಂಜಾಬ್ ಹಾಗೂ ಕೇರಳದಂತಹ ರಾಜ್ಯಗಳಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಿಗೆ ₹3ರಿಂದ ₹4 ಕೋಟಿ ವರೆಗೆ ನಗದು ಬಹುಮಾನ ನೀಡಲಾಗುತ್ತಿದೆ. ಅಲ್ಲದೆ, ಡಿವೈಎಸ್‌ಪಿ ಶ್ರೇಣಿಯ ಸರ್ಕಾರಿ ಉದ್ಯೋಗ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಪೂವಮ್ಮ ತಿಳಿಸಿದರು.

ಆದರೆ ಕರ್ನಾಟಕದಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಿಗೆ ನೀಡಲಾಗುತ್ತಿರುವ ಪ್ರೋತ್ಸಾಹಧನ ಕೇವಲ ₹35 ಲಕ್ಷದಷ್ಟಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಈ ಮೊತ್ತದಲ್ಲಿ ಸಾಕಷ್ಟು ವ್ಯತ್ಯಾಸವಿದ್ದು, ಸರ್ಕಾರ ಈ ತಾರತಮ್ಯವನ್ನು ಸರಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಕರ್ನಾಟಕದ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸಿ ಸಾಧನೆ ಮಾಡುತ್ತಿದ್ದು, ಅವರಿಗೆ ಅರ್ಹ ಗೌರವ, ಪ್ರೋತ್ಸಾಹ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಎಂ.ಆರ್. ಪೂವಮ್ಮ ಮನವಿ ಮಾಡಿದರು.

ಇದಕ್ಕೂ ಮೊದಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಂ.ಆರ್. ಪೂವಮ್ಮ ಅವರನ್ನು ಅಭಿಮಾನಿಗಳು ಹಾಗೂ ಕ್ರೀಡಾಭಿಮಾನಿಗಳು ಸಂಭ್ರಮದಿಂದ ಸ್ವಾಗತಿಸಿದರು.

Leave a Reply

Your email address will not be published. Required fields are marked *

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

error: Content is protected !!