ಜನ ಮನದ ನಾಡಿ ಮಿಡಿತ

Advertisement

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ.

ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಕಡವೆ ರಸ್ತೆ ಅಡ್ಡ ಬಂದಿದ್ದು, ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.

ಘಟನೆಯಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ. ಈ ಪ್ರದೇಶದಲ್ಲಿ ಕಾಡುಪ್ರಾಣಿಗಳ ಸಂಚಾರವಿರುವ ಹಿನ್ನೆಲೆಯಲ್ಲಿ ರಾತ್ರಿ ಹಾಗೂ ಮುಂಜಾನೆ ವೇಳೆ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಹಿಂದೆ ಕೂಡ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳ ಸಂಚಾರದಿಂದ ವಾಹನಗಳಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎನ್ನಲಾಗಿದೆ. ಕಾಡುಪ್ರಾಣಿಗಳ ಓಡಾಟವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಿಸುವುದರ ಜತೆಗೆ ರಸ್ತೆ ಬದಿಯ ಪೊದೆಗಳನ್ನು ನಿಯಮಿತವಾಗಿ ತೆರವುಗೊಳಿಸುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಕಾಡುಪ್ರಾಣಿಗಳು ರಸ್ತೆ ದಾಟುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

error: Content is protected !!