ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ.
ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಕಡವೆ ರಸ್ತೆ ಅಡ್ಡ ಬಂದಿದ್ದು, ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಘಟನೆಯಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ. ಈ ಪ್ರದೇಶದಲ್ಲಿ ಕಾಡುಪ್ರಾಣಿಗಳ ಸಂಚಾರವಿರುವ ಹಿನ್ನೆಲೆಯಲ್ಲಿ ರಾತ್ರಿ ಹಾಗೂ ಮುಂಜಾನೆ ವೇಳೆ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಹಿಂದೆ ಕೂಡ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳ ಸಂಚಾರದಿಂದ ವಾಹನಗಳಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎನ್ನಲಾಗಿದೆ. ಕಾಡುಪ್ರಾಣಿಗಳ ಓಡಾಟವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಿಸುವುದರ ಜತೆಗೆ ರಸ್ತೆ ಬದಿಯ ಪೊದೆಗಳನ್ನು ನಿಯಮಿತವಾಗಿ ತೆರವುಗೊಳಿಸುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಕಾಡುಪ್ರಾಣಿಗಳು ರಸ್ತೆ ದಾಟುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…