ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಕ್ಷಿತ್ ಸುವರ್ಣ ಅವರು ಎಂ.ಆರ್. ಪೂವಮ್ಮ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಅವರ ಕ್ರೀಡಾ ಸಾಧನೆ, ಪರಿಶ್ರಮ ಹಾಗೂ ಸಮರ್ಪಣಾ ಮನೋಭಾವವನ್ನು ಶ್ಲಾಘಿಸಿದರು.
ಎಂ.ಆರ್. ಪೂವಮ್ಮ ಅವರು ಅಂತರರಾಷ್ಟ್ರೀಯ ಕ್ರೀಡಾ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸಿ ಗಮನಾರ್ಹ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಅಕ್ಷಿತ್ ಸುವರ್ಣ ಹೇಳಿದರು.

ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೂಡ ಎಂ.ಆರ್. ಪೂವಮ್ಮ ಅವರ ಕ್ರೀಡಾ ಸಾಧನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ ಎಂದು ಅಕ್ಷಿತ್ ಸುವರ್ಣ ತಿಳಿಸಿದರು.



