ಕರಾವಳಿ

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ ಕಟಪಾಡಿ ಅವರು ಈಡೇರಿಸಿದ್ದಾರೆ.

ಕಳೆದ ಜುಲೈ 26ರಂದು ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ರವಿ ಕಟಪಾಡಿ ಅವರನ್ನು ಮಗುವಿನ ಪೋಷಕರು ಭೇಟಿಯಾಗಿ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ಅಷ್ಟಮಿ ವೇಷದ ಸಂದರ್ಭದಲ್ಲಿ ತಮ್ಮಿಂದಾದಷ್ಟು ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದರು.

ಅದರಂತೆ ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಸೀಯಾಳಾಭಿಷೇಕ ಕಾರ್ಯಕ್ರಮದ ಸಂದರ್ಭದಲ್ಲಿ ರವಿ ಕಟಪಾಡಿ ಅವರು ತಮ್ಮ ತಂಡದೊಂದಿಗೆ ಆಗಮಿಸಿ ಮಗುವಿನ ಚಿಕಿತ್ಸೆಗೆ ₹2.50 ಲಕ್ಷ ನೆರವನ್ನು ಹಸ್ತಾಂತರಿಸಿದರು.

ಕ್ಷೇತ್ರದ ಧರ್ಮದರ್ಶಿಗಳ ಸಮ್ಮುಖದಲ್ಲಿ ನೆರವಿನ ಮೊತ್ತವನ್ನು ಮಗುವಿನ ಕುಟುಂಬಕ್ಕೆ ನೀಡಲಾಯಿತು. ರವಿ ಕಟಪಾಡಿ ಅವರ ಈ ಮಾನವೀಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…

41 mins ago

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…

2 days ago

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…

2 days ago

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…

2 days ago

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…

2 days ago

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

3 days ago