ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್ ಮುಳಿಯ ಶ್ಯಾಮ ಭಟ್ (81) ಅವರು ಅ.4ರಂದು ನಿಧನರಾದರು. ಪುತ್ತೂರಿನ ಪಾಂಗ್ಲಾಯಿಯಲ್ಲಿರುವ ‘ಶ್ಯಾಮಲೋಚನಾ’ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದ ಬಳಿಕ ಅವರು ಕೊನೆಯುಸಿರೆಳೆದರು.
ಚಿನ್ನಾಭರಣ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಶ್ಯಾಮ ಭಟ್ ಅವರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಉದ್ಯಮ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೃತರು ಪುತ್ರರಾದ ಕೇಶವ ಪ್ರಸಾದ್ ಮುಳಿಯ, ಕೃಷ್ಣನಾರಾಯಣ ಮುಳಿಯ, ಪುತ್ರಿ ವಿದ್ಯಾಸರಸ್ವತಿ, ಅಳಿಯ ಶ್ಯಾಮಸುಂದರ್, ಸೊಸೆಯಂದಿರಾದ ಕೃಷ್ಣವೇಣಿಪ್ರಸಾದ್ ಮುಳಿಯ, ಅಶ್ವಿನಿಕೃಷ್ಣ ಮುಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಶ್ಯಾಮ ಭಟ್ ಅವರ ಅಂತಿಮ ದರ್ಶನ ಹಾಗೂ ನಮನ ಸಲ್ಲಿಸಲು ಅ.6ರಂದು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುತ್ರರಾದ ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣನಾರಾಯಣ ಮುಳಿಯ ತಿಳಿಸಿದ್ದಾರೆ.
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…