ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಅಥ್ಲೀಟ್ ಎಂ.ಆರ್. ಪೂವಮ್ಮ ಅವರನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಎಚ್‌ಎಂಟಿ ಭವನದಲ್ಲಿ ಆತ್ಮೀಯವಾಗಿ ಗೌರವಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಪೂವಮ್ಮ ಅವರ ಪೋಷಕರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಕೇಂದ್ರ ಸಚಿವರು ಪೂವಮ್ಮ ಹಾಗೂ ಅವರ ಕುಟುಂಬದ ಸದಸ್ಯರನ್ನು ಆತ್ಮೀಯವಾಗಿ ಸತ್ಕರಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಎಂ.ಆರ್. ಪೂವಮ್ಮ ಅವರು ಮಾಡಿರುವ ಸಾಧನೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿಯೂ ಪೂವಮ್ಮ ಅವರು ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…