ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆನೆದೋಡಿಯಲ್ಲಿ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಳಗಾದ ಘಟನೆ ನಡೆದಿದೆ.

ಆನೆದೋಡಿ ನಿವಾಸಿ ನಾಗೇಶ್ ಕುಲಾಲ್ ಅವರ ಮನೆಗೆ ಮುಂಜಾನೆ ಸಿಡಿಲು ಬಡಿದಿದ್ದು, ಸಿಡಿಲಿನ ತೀವ್ರತೆಗೆ ಮನೆಯ ಕಟ್ಟಡ ಹಾಗೂ ಮನೆಯೊಳಗಿದ್ದ ವಸ್ತುಗಳು ಹಾನಿಗೊಂಡಿವೆ.
ಘಟನೆ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಸಲಾಕ್ಷಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಮುಂದುವರಿಸಲಾಗಿದೆ.

ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಗಾಯಾಳು ಕುಸಲಾಕ್ಷಿ ಅವರ ಆರೋಗ್ಯ ವಿಚಾರಿಸಿ, ಕುಟುಂಬದವರಿಗೆ ಧೈರ್ಯ ತುಂಬಿದರು.



