ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ ಅ.8 ಮತ್ತು 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ನಡೆಯಲಿದೆ.

ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು ಹಾಗೂ ಯುವ ನವೋದ್ಯಮಿಗಳನ್ನು ಒಂದೇ ವೇದಿಕೆಗೆ ಕರೆತಂದು, ತಂತ್ರಜ್ಞಾನ ಆಧಾರಿತ ಪರಿಹಾರಗಳ ಮೂಲಕ ನೈಜ ಜಗತ್ತಿನ ಸವಾಲುಗಳಿಗೆ ಉತ್ತರ ಕಂಡುಕೊಳ್ಳುವುದು ಹ್ಯಾಕಥಾನ್‌ನ ಉದ್ದೇಶವಾಗಿದೆ ಎಂದು ಎ.ಜೆ. ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ಕ್ಯಾಂಪಸ್ ನಿರ್ದೇಶಕ ಡಾ. ಟಿ. ಜಯಪ್ರಕಾಶ್ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹ್ಯಾಕಥಾನ್‌ನಲ್ಲಿ ಒಟ್ಟು ₹1 ಲಕ್ಷ ಬಹುಮಾನ ಮೊತ್ತ ನೀಡಲಾಗುತ್ತಿದ್ದು, ನವೀನತೆ, ತಾಂತ್ರಿಕ ಪರಿಣಾಮಕಾರಿತ್ವ ಹಾಗೂ ಸಾಮಾಜಿಕ ಉಪಯುಕ್ತತೆಯನ್ನು ಆಧರಿಸಿ ತಂಡಗಳನ್ನು ಗೌರವಿಸಲಾಗುವುದು. ಅ.8ರಂದು ಜುವೆಗೊ ಸ್ಟುಡಿಯೋಸ್ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದು, ಅ.9ರಂದು ಯುನಿಕೋರ್ಟ್ ಸಹ-ಸಂಸ್ಥಾಪಕ ಹಾಗೂ ಸಿಟಿಒ ಪ್ರಶಾಂತ್ ಶೆಣೈ ಕಟ್ಟಾಡಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಬಂಟ್ವಾಳ: ತಲಪಾಡಿಯಲ್ಲಿ ಲಾರಿ–ಬಸ್–ಕಾರ್ ನಡುವೆ ಸರಣಿ ಅಪಘಾತ; ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯ..!

ಬೆಂಗಳೂರು: ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸನ್ಮಾನ

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

error: Content is protected !!